This page has not been fully proofread.


 
ಮಿಂಚನುಳ್ಳ ಎಳೆವೆಂಡಿರುಳ್ಳ, ಮಳೆಬಿಲ್ಲ ಬಣ್ಣ ತಾಳಿ,
ಹಾಡಿಗಾಗಿ ಗುಡುಗುಡುಗಿದಂತೆ ಮದ್ದಳೆಯ ಸೊಲ್ಲ ಹೇಳಿ ।
ಮುಗಿಲ ಮುಟ್ಟ ಕರುಮಾಡ ಮುತ್ತು ರತುನಗಳ ನೀರು ತುಂಬಿ
ಇಹವು ಇಂಥ ಮಹಮನೆಗಳಲ್ಲಿ ಅವು ನಿನಗೆ ಸಾಟಿ ಎಂಬಿ
 

 
1
 
ಮಾಟ ತಾವರೆಯು ಕೈಗೆ, ಕುರುಳಿನಲಿ ಬಾಲಕುಂದ ಮಾಲೆ,
ಲೋಧ್ರ ಪುಷ್ಪಗಳ ಸೂಸು ಹುಡಿಯು ಚೆಲುವಾದ ಮೊಗದ ಮೇಲೆ
ಚೆಂದ ಕುರುವಕವು ಹೇಳಲಿನಲ್ಲಿ, ಸಿರಸಲವು ಕಿವಿಯ ಬಳಿಗೆ
ಬೈತಲಲ್ಲಿ ಕಡವಾಲ ಹೂವು ಅಲ್ಲಿರುವ ಹೆಣ್ಣುಗಳಿಗೆ ।
 

 
ಯಕ್ಷರಲ್ಲಿ, ಬಿಳಿ ಹರಳಿನಿಂದ ರಚಿಸಿರುವ ಸೌಧಗಳಲಿ,
ಚುಕ್ಕೆ ನೆರಳೆ ಅರಳಾಗಿ ಹಾಸೆ, ನಲುವೆಣ್ಣ ತೋಳುಗಳಲಿ ।
ನಿನ್ನ ಗುಡುಗಿನೊಡಗೂಡಿ ನುಡಿಸುವರು ವಾದ್ಯವಾದ್ಯವಾಗಿ
ಬಯಕೆ-ತಾಳೆ-ಹಾಲನ್ನು ಕುಡಿವರೋ ಕಾಮಕೇಳಿಗಾಗಿ ।
 

 
ನಂದನಂಗಳಲಿ ಗಂಗೆ ಮಿಂದ ತಂಗಾಳಿ ಹಾಯುವಲ್ಲಿ
ಅಲ್ಲಿ ತೀರದಲ್ಲಿ ಬಿಸಿಲ ಮರೆಸಿ ಮಂದಾರ ಛಾಯೆಯಲ್ಲಿ
ಹೊನ್ನ ಮಳಲು ಮಣಿ ತೂರಿ ಆಡುವರು ಹುಟ್ಟುಜವ್ವನಿಯರು
ಅಮರರಿಂದ ಪ್ರಾರ್ಥಿತರು ಆಗುವರು ಅಮರ ಕನ್ನಿಕೆಯರು ।
 
ಉಟ್ಟ ರೇಸಿಮೆಯ ನೀರಿ ಸೆಳೆಯ ಆತುರದ ಕರಗಳಿಂದಾ
ಮತ್ತೆ ಜರೆಯಲಿರೆ ಮೊದಲೆ ಸಡಲಿದಾ ಕಟಿಯ ನೀವಿಬಂಧ ॥
ತೊಂಡೆ ತುಟಿಯ ಮರುಳೆಯರು ಪ್ರಿಯರಿದಿರು ನಾಚಿ ಬಳುಕಿ ಬಗ್ಗಿ
ರತ್ನದೀಪ ನಂದಿಸಲು ಹವಣಿಪರು ಸುಳ್ಳೆ ಹುಡಿಯನುಗ್ಗಿ ।
 
ಬಿಡದೆ ಬೀಸುವಾ ಗಾಳಿಯೊಡನೆ ಮನೆಯೇಳು ನೆಲೆಯನೇರಿ
ಅಲ್ಲಿ ಗೊಂಬೆಗಳನಂದಗೆಡಿಸಿ ಹನಿಯಿಂದ, ಹೆದರಿ ಜಾರಿ ।
ತಪ್ಪಿತಸ್ಥರೆನೆ ಕಂಡಿಯಿಂದ ಹೊರಬೀಳತಾವ ನೂಗಿ
ಮರಳಿ ಮೋಡ ತೊಟ್ಟಿಕ್ಕತಾವ ಹರಿ ಹಿಂಜು ಮಂಜು ಆಗಿ
೨೮ ಕನ್ನಡ ಮೇಘದೂತ - ಅಂಬಿಕಾತನಯದತ್ತರ ಭಾವಾನುವಾದ : ಸಂ. : ವಾಮನ ಬೇ