This page has not been fully proofread.


 
ಒಬ್ಬ ಯಕ್ಷ ತನ್ನೊಡೆಯನಿಂದ ನಲ್ಲೆಯನು ಅಗಲಿ ಬೆಂದು
ಶಪಿತ ವರುಷವನು ಕಳೆಯಲಾಗದೇ ಮಹಿಮೆ ಕಳೆದುಕೊಂಡು
ಜನಕತನಯ ಮಿಂದುದಕಗಳಲಿ ತಣ್ನೆಳಲ ಅಂಗಳಲ್ಲಿ
ವಸತಿ ನಿಂದನೋ ರಾಮಗಿರಿಯ ಪುಣ್ಯಾಶ್ರಮಂಗಳಲ್ಲಿ
 

 
ಅಗಲಿ ಇದ್ದರೂ ಆಸೆಗೊಂಡಿರಲು ಗಿರಿಯೊಳಂತು ಇಂತು
ಕೆಲವೆ ತಿಂಗಳಲ್ಲಿ ಚಿನ್ನ ಕಡಗ ಮೊಳಕೈಗೆ ಸರಿದು ಬಂತು
ಕಾರಹುಣ್ಣಿಮೆಯ ಮಾರನೆಯ ದಿನವೆ ಮೋಡ ಕೋಡನಪ್ಪಿ
ಕಂಡಿತೊಡ್ಡಿನೊಡ ಡಿಕ್ಕಿಯಾಡುವಾ ಆನೆ ಬೆಡಗನೊಪ್ಪಿ ।
 

 
ಮೋಡ ನೋಡಿ ಮನಸಾಗಿ ನಿಂತನೋ ಹೇಗೋ ಏನೋ ಕಂಡು
ರಾಜರಾಜನನುಚರನು ಇದ್ದ ಕಣ್ಣೀರ ನುಂಗಿಕೊಂಡು
 
ಮೋಡ ಕಂಡೊಡನೆ ಬೇರೆ ಬಗೆಯಹುದು ಸುಖಿಗು ಎಂತೋ ಏಕೊ
ಕೊರಳ-ಗೆಳತಿ ದೂರುಳಿದ ಮೇಲೆ ಆ ಗತಿಯ ಹೇಳಲೇಕೋ ॥
 
ಬಂತು ಶ್ರಾವಣಾ, ಎಂತು ಬದುಕುವಳೋ ಮಡದಿ ಜೀವ ಉಳಿಸಿ
ಮೋಡದೊಡನೆ ತನ್ನೊಳಿತಿನೊಸಗೆಯನು ಅಂತೆ ಕಳಿಸಲೆಳಸಿ
ಬೆಟ್ಟ-ಮಲ್ಲಿಗೆಯ ಹೊಚ್ಚ ಹೂವಿನೊಡ ಕಾಲನೀರ ನೀಡಿ
 
ಇದಿರುಗೊಂಡು ಬರಮಾಡಿಕೊಂಡ ಒಲಿದೊಲಿವ ಮಾತನಾಡಿ ।
 

 
ಗಾಳಿ-ನೀರು-ಉಗಿ-ಬೆಂಕಿಗೂಡಿ ಆಗಿರುವ ಮೇಘವೆತ್ತ
ಎತ್ತ ಮಾತುಗಳು ? ಮೋಡ ಜೀವವೇ ? ಏನೋ ಎತ್ತೋ ಚಿತ್ರ ।
ಭೇದವೆಣಿಸದೆಯೆ ಕಂಡ ಮೋಡವನೆ ಬೇಡಿಕೊಂಡ ತಾನು
ಜಡವೊ ಚೇತನವೊ ಬಯಕೆ ಮರುಳರಿಗೆ ಯಾವ ವಸ್ತುವೇನು ? ।
 
ಪುಷ್ಕರಾದಿ ಜಗ ಬಲ್ಲ ವಂಶದವನಲ್ಲೆ, ಬಲ್ಲೆ ನಾನು
ಕಾಮರೂಪಿಯೇ ಪ್ರಕೃತಿಪುರಷನೋ
 
ಇಂದ್ರನಲ್ಲಿ ನೀನು ।
ದೈವ-ಬಂಧು ನೀ ಬೇಡೆ ಕೆಡುಕರಲಿ ; ಬಯಕೆಗೂಡಿಯೇನು ?
ಲೇಸು ಒಳ್ಳವರ ಬೇಡಿಕೊಂಬುದೇ ವ್ಯರ್ಥವಾದರೂನು ।
 
೧೨ ಕನ್ನಡ ಮೇಘದೂತ - ಅಂಬಿಕಾತನಯದತ್ತರ ಭಾವಾನುವಾದ : ಸಂ. : ವಾಮನ ಬೇಂ