This page has been fully proofread once and needs a second look.

೨೩
 
ನನ್ನ ಕುರಿತು ಪದವೊಂದು ಕಟ್ಟಿ ಅದ ಹೇಳಲೆಣಿಸಿ ಜಾಣೆ

ತಾನೆ ರಚಿಸಿದಾ ಏರು-ಇಳುವುಗಳ ಕ್ರಮವ ಮರೆತು ತಾನೇ

ತೊಟ್ಟು ಸುರಿವ ಕಂಬನಿಯ ತಂತಿಯನೆ ಮಿಡಿಯುತಿಹಳೊ ದೀ
ನೆ
ಮಾಸುಬಟ್ಟೆ ತೊಟ್ಟವಳ ತೊಡೆಯೊಳಿರಬಹುದು ಬಿದ್ದ ವೀಣೆ
 

 

 
ಕಳೆದವೆಷ್ಟು ಇನ್ನುಳಿದವೆಷ್ಟು ದಿನವೆಂದು ಲೆಕ್ಕವಿಟ್ಟು

ಹೊಸ್ತಿಲಕ್ಕೆ ಹೂವಿಟ್ಟು ನೋಡುವಳೋಳೊ ನಾನು ಹೋದ ತೊಟ್ಟು

ಇಲ್ಲ ಎದೆಯ ಮುಟ್ಟಿಳಿದ ಮೊದಲ ಸಂಗಗಳ ಸವಿವಳೇನೋ

ನಲ್ಲರಗಲೆ ನಲ್ಲೆಯರಿಗೆಲ್ಲ ಇವು ಆಟ ಇಷ್ಟೆ ತಾನೋ ?
 

 

 
ಹಗಲು ಹೊತ್ತು ಹೋದೀತು ಕೆಲಸದಲ್ಲಿ ಹೇಗೊ, ಬಲ್ಲೆ ನಾನು

ಇರುಳು ಅವಳ ಗತಿಯೇನೋ ? ಅಳುವದೋ ? ನೆನೆಯಲೊಲ್ಲೆ ನಾನು
 

ನನ್ನ ಸುದ್ದಿ ಹೇಳಿದರೆ ಸಾಕು, ನೀನಿಣಿಕಿ ನೋಡು, ಪಾಪಾ

ಸ್ವಾ ನೆಲದೊಳೇ ನಿದ್ದೆಯಿಲ್ಲದೇ ಹೊರಳುತಿರುವ ತಾಪಾ
 

 

 

 
ಹೊರಳು ಮಗ್ಗುಲಗಲಿಕೆಯ ಹಾಸಿನಲಿ ಸೋತ ಮೈಯ್ಯ ಚೆಲ್ಲಿ

ಓರೆಯಾಗಿ ಬಿದ್ದಿರುವ ಚಂದ್ರಕಳೆಯಂತೆ ಪಡುವಲಲ್ಲಿ,

ಯಾವ ಇರುಳು ನನ್ನೊಡನೆ ಬೇಟದಲಿ ಕ್ಷಣಿಕವಾಗಿ ಹೋಯ್ತು

ಅವಳಿಗದುವೆ ಬಿಸಿಯುಸಿರಿಯತ್ತು ಮುಗಿದೀತೆ ಎನುವೊಲಾಯ್ತು
 

 

 
ಇಂಪುಗರೆವ ಇಂದುವಿನ ಕಿರಣ ಜಾಳಾಂದ್ರದಿಂದ ಸುರಿ
ಯೆ
ಆಸೆಗೂಡಿ ಹರಿದೋಡಿ, ನೋಡಿ, ಒಡೆದಂತೆ ಹಿಂದೆ ಸರಿಯೆ

ಮುಚ್ಚಲಿಲ್ಲ, ಸರಿ, ಬಿಚ್ಚಲಿಲ್ಲ ಎನುವಂಥ ಕಮಲದಂತೆ

ಎವೆಯು ತೊಯ್ದು ಕಣ್ತೆರೆಯಲೊಲ್ಲದೇ ನಿಲ್ವಳೇನೋ ಭ್ರಾಂ
 
ತೆ ॥
 

 
ತುಟಿಯ ಚಿಗುರನೊಣಗಿಸುವ ಉಸಿರಿನಲೆ ಹಾರಿಸುವಳು ಎಲ್ಲಾ

ಎಣ್ಣೆ ಕಾಣದುರುಟಾದ ಮುಂಗುರುಳು ಒಲೆಯೆ ಗಲ್ಲಗಲ್ಲಾ

ಕಣ್ಣ ತುಂಬ ಕಂಬನಿಯೆ ಆಗಿ, ಕುದಿಯುವಳೊ ತಾನು ಬೆಂದು

ನಿದ್ದೆ ಬಂದು, ಕನಸಾರೆ ಕಂಡು, ಸೇರೇನೆ ನನ್ನನೆಂದು
೩೬ ಕನ್ನಡ ಮೇಘದೂತ - ಅಂಬಿಕಾತನಯದತ್ತರ ಭಾವಾನುವಾದ : ಸಂ. : ವಾಮನ ಬೇಂದ್ರೆ
 
॥ ೨೮