2023-02-19 20:40:10 by ambuda-bot
This page has not been fully proofread.
  
  ೨೯
  
ಅಗಲಿದಂತೆ ಕಟ್ಟಿತ್ತು ಮುಡಿಯು, ಬಿಚ್ಚಿತ್ತು ಹೆಳಲಮಾಲೆ
ಕೂಡಿದಂದು ಹಾಕೇನು ನಾನು, ಮುಡಿಸೇನು ಎಂದು ಬಾಲೆ ।
ಕಾದು ಇಹಳು, ಜಡೆಗಟ್ಟಿ ಗಲ್ಲಗಳನುಜ್ಜಿ ಅವುಗಳೊತ್ತೆ
ಸಮರುತಿಹಳು ಬೆಳೆದುಗುರಿನಿಂದೆ ಕೂದಲವ ಮತ್ತೆ ಮತ್ತೆ
   
೩೦
   
॥
   
ತೊಡಿಗೆ ತೊರೆದು ಹೆಣವಾಗಿ ಇಹಳೊ ನಾ ಹೇಳಲೇಕೆ ಬಣ್ಣ
ಹಾಸಿನಲ್ಲು ಮೈ ಹೊರಳುವಾಗಲೂ ನರಳುತಿಹಳೊ ಸಣ್ಣ
ನೀನು ಕೂಡ ಅದ ಕಂಡ ಕೂಡಲೇ ಹನಿಸಿ ಬಿಡುವಿ ಕಣ್ಣ
ಕರುಳುಯಿದ್ದ ಎದೆಗಾರರಾರಿದಕೆ ಕರಗದಿರುವರಣ್ಣ ? ।
   
೩೧
   
ನನ್ನಳೊಲೆದ ಆ ನಿನ್ನ ಅತ್ತಿಗೆಯ ಚಿತ್ತವಿಷ್ಟು ನೊಂದು
ತರ್ಕಿಸುವೆನು ಮೊದಲಗಲಿ ನನ್ನ ಇರಬಹುದು ಹೀಗೆ ಎಂದು
'ನಾನೆ ಕಾಮ, ಲೋಕೈಕ ಪತಿಯು' ಎನುವಂತೆ ಸತಿಯ ಲೀಲೆ
ಬಣ್ಣಿಸಿದೆನು ವಾಚಾಳಿಯಂತೆಯೋ ? ಹೇಳು ಕಂಡ ಮೇಲೆ
   
ಕುರುಳು ಜೋತು, ಕುಡಿಗಣ್ಣು ಮುಚ್ಚಿ ; ಮಂಕಾಗಿ ಕಾಡಿಗಿರದೇ
ಮಧುವ ಕುಡಿಯದೊಣಕಾದ ನಯನ ಮುರಿ ಹುಬ್ಬಿನಾಟ ಮರೆದೇ ॥
ಹಾರಿ ತನ್ನ ಎಡಗಣ್ಣು, ಬೆಚ್ಚೆ ಬರಿ ಬಾನ ತುಂಬೆ ನೀನೋ
ಸುಳಿಯೆ ಮೀನ ಚಲಕಮಲದಂತೆ ಆ ಕಣ್ಣು ಕಾಂಬವೇನೊ ॥
   
೩೩
   
ಕೆಲಕೆ ಎಡಕೆ ಇನ್ನೂನು ಬಿದ್ದಿಹುದು-ಏನೊ ಕೆಟ್ಟ ಗಳಿಗೆ !
ನಡುವುಸುತ್ತಿನಾ ಮುತ್ತು ಮಾಲೆ ಸಿಕ್ಕನ್ನ ಉಗುರುಗಳಿಗೆ ।
ಕಂಡು ಅದನ್ನು ಹೊಂಬಾಳೆದಿಂಡುದೊಡೆ ಅದಿರೆ, ನಾನು ಬಳಿಗೆ
ಇಲ್ಲ, ಗಳಿಗೆ ಕಳೆಯುವಳು ನನೆಸಿ ಆ ನೀರೆ ನಿರಿಗೆಗಳಿಗೆ
   
೩೪
   
ನೀನು ಹೋದ ಆ ಹೊತ್ತೆ ನಿದ್ದೆ ಚಿತ್ತೆಸೆ ಅವಳ ನೋಡಾ
ಮೇಘರಾಜ, ದಯೆಮಾಡಿ ತಡೆಯೊ ಹುಸಿ ಗುಡುಗು ಹಾಕಬೇಡಾ ।
ಹೇಗೆ ಕನಸಿನಲಿ ಸೇರಿ ನನ್ನ ಮುಗಿಬಿದ್ದು ಕೊರಳ, ಹುಚ್ಚಿ
ಎದ್ದಾಳೊ ಬಾಲೆ ಬಿದ್ದಾಳೋ ಬೆದರಿ ಕೈ ಮಲಕು ಬಿಚ್ಚಿ ಬೆಚ್ಚಿ
೩೮ ಕನ್ನಡ ಮೇಘದೂತ - ಅಂಬಿಕಾತನಯದತ್ತರ ಭಾವಾನುವಾದ : ಸಂ. : ವಾಮನ ಬೇಂದ್ರೆ
   
M