Proofing

✦

This page has been fully proofread once and needs a second look.

೪೫
 
ಮೂರು ಜಾವ ಉದ್ದಿದ್ದ ಇರುಳು ಕ್ಷಣದಂತೆ ಕಳೆಯಬಹುದೇ

ಇಡಿಯ ಹಗಲು ಯಾವಾಗಲೂನು ದಿಗಿಲಾಗದಂತೆ ಇಹುದೇ
॥
ಇಂತು ಚಿತ್ರತ ಕೈಗೂಡದಾಗ ಬಯಲಾಸೆಯಿಂದ ನೊಂದು

ನಿನ್ನ ವಿರಹ ವ್ಯಥೆಯಿಂದ ಬೆಂದು,ಬದುಕಿಹೆನು ಹೇಗೊ ಇಂದು ।
 
॥೪೬
 
೫
 
ಆದರೂನು ಹಿಡಿದಿರುವೆ ಜೀವ, ಏನೇನೋನೊ ಲೆಕ್ಕ ಹಾಕಿ

ಸುಭಗೆ ಅಂಜಿ ನೀ ಸಾಯಬೇಡ, ಕಳೆ ಕಾಲ ಹೇಗೊ ನೂಕಿ ।
॥
ಯಾರು ಬರಿಯ ಸುಖ, ಬರಿಯ ದು:ಖ ಪಟ್ಟವರು ಲೋಕದಲ್ಲಿ ?

ದೆಸೆಯು ಕೆಳಗೆ ಮೇಲಾಗಿ ತಿರುಗುವದು ಏಕಚಕ್ರದಲ್ಲಿ
 
॥ ೪೭
 
೬
 
ಹಾವು ಹಾಸಿಗೆಯ ಹರಿಯು, ತೊರೆವ ದಿನ, ಶಾಪ ಮುಗಿಯಲಹುದು

ನಾಲ್ಕು ತಿಂಗಳನು ಕಣ್ಣು ಮುಚ್ಚಿ ನೀನಿನ್ನು ಕಳೆಯಬಹುದು ॥

ಬಳಿಕ ಬರುವೆ, ಇನ್ನುಳಿದ ಬಯಕೆಗಳು ಇರಲಿ ಏಕೆ ಚಿಂತೆ ?

ಬೆಳೆವ ತಿಂಗಳಲ್ಲಿ ಇರುಳು ಇರುಳುಗಳ ಅದಕೆ ಕಳೆವೆವೆಂತೆ ॥
೪೮
 
೭
 
ಒಮ್ಮೆ ನಿನಗೆ ದಿನದಂತೆ ಕೊರಳ ತಳಕಿರಿಸಿ ನಿದ್ದೆಯಂತೆ

ತೋಳದಿಂಬಿನಲಿ ಹೊರಳಿ, ನೀನಳುತ ಏಕೊ ಎದ್ದೆಯಂತೆ ।
॥
ಕೇಳಕೇಳುತಿರೆ ಏನು ಎಂದು ಒಳನಕ್ಕು ಅಂದೆಯಂತೆ :-

"ಕಂಡೆ ಕನಸಿನಲಿ, ಕಳ್ಳ, ನೀನು ಯಾವಳನೊ ಕೂಡಿದಂತೆ"
 
॥ ೪೯
 
೮
 
ಕುಶಲನಿರುವೆ ನಾನಿಲ್ಲಿ ನಿನ್ನನೇ ನೆನೆದು ಧೈರ್ಯತಾಳಿ

ನೀನು ಕೂಡ ಎದೆಗೆಡಿಸಿಕೊಳ್ಳದಿರು ಏನೊ ಸುದ್ದಿ ಕೇಳಿ ।
॥
ಅಗಲಿದಾಗೆಗ ತಿನ್ನುವದು ಸ್ನೇಹವೆನ್ನುವರು ಜೀವವನ್ನು

ಕೂಡಿದೊಡನೆ ಅದೆ ಸೂರೆ ಮಾಡುವದು ಪ್ರೇಮಭಾವವನ್ನು
 
॥ ೪೪ ಕನ್ನಡ ಮೇಘದೂತ - ಅಂಬಿಕಾತನಯದತ್ತರ ಭಾವಾನುವಾದ : ಸಂ. : ವಾಮನ ಬೇರೆ
 
೯